ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ, 15 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದ ಕೋರ್ಟ್…


ಬೆಳಗಾವಿ : ಬೆಳಗಾವಿಯಲ್ಲಿ ನಡೆದ ಅಪ್ರಾಪ್ತ ಬಾಲಕಿಯ ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳನ್ನು 15 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಲಯ ಆದೇಶ ಮಾಡಿದೆ. ಇಂದು ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಧೀಶರು ಅತ್ಯಾಚಾರಿ ಅರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡುವ ಆದೇಶ ಮಾಡಿದ ಬೆನ್ನಲ್ಲೇ ಪೊಲೀಸರು

ಪ್ರಕರಣದಲ್ಲಿರುವ ಐವರು ಆರೋಪಿಗಳ ಪೈಕಿ ಮೂವರು ಆರೋಪಿಗಳನ್ನು ಹಿಂಡಲಗಾ ಜೈಲಿಗೆ ರವಾನೆ ಮಾಡಿ ಇಬ್ಬರು ಅಪ್ರಾಪ್ತ ಆರೋಪಿಗಳನ್ನು ರಿಮಾಂಡ್ ಹೋಂ ಗೆ ಕಳುಹಿಸಿದ್ದಾರೆ.

ಇನ್ನೋರ್ವ ಆರೋಪಿಗಾಗಿ ಎಪಿಎಂಸಿ ಠಾಣೆಯ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಎಪಿಎಂಸಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


Leave a Comment

Your email address will not be published. Required fields are marked *