ಬೆಂಗಳೂರು: ಆರ್ಸಿಬಿ ವಿಜಯೋತ್ಸವದ ವೇಳೆ ನಡೆದ ದುರಂತಕ್ಕೆ ಸಂಬಂಧಿಸಿದಂತೆ ಗುಪ್ತಚರ ಇಲಾಖೆ ವೈಫಲ್ಯದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಎಡಿಜಿಪಿಯಾಗಿದ್ದ ಹೇಮಂತ್ ನಿಂಬಾಳ್ಕರ್ ಅವರನ್ನ ಎತ್ತಂಗಡಿ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಗುಪ್ತಚರ ಇಲಾಖೆಯ ಪ್ರಭಾರಿ ಎಡಿಜಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹೇಮಂತ್ ನಿಂಬಾಳ್ಕರ್ ಅವರನ್ನ ಎತ್ತಂಗಡಿ ಮಾಡಲಾಗಿದೆ. ಈ ಸ್ಥಾನಕ್ಕೆ ಎಸ್ .ರವಿ ಅವರನ್ನು ವರ್ಗಾವಣೆ ಮಾಡಿದೆ.
ಗೃಹ ಇಲಾಖೆಯ ಕಾರ್ಯದರ್ಶಿಯಾಗಿ ಕೆ.ವಿ.ಶರತ್ ಚಂದ್ರ ಅವರನ್ನು ನಿಯುಕ್ತಿಗೊಳಿಸಲಾಗಿದೆ. ಇವರಿಗೆ ಹೆಚ್ಚುವರಿಯಾಗಿ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿಯಾಗಿ ಮುಂದುವರೆಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕಾಲ್ತುಳಿತ ಪ್ರಕರಣ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಸೇರಿದಂತೆ ನಾಲ್ವರು ಅಧಿಕಾರಿಗಳನ್ನು ಸರ್ಕಾರ ಅಮಾನತು ಮಾಡಿ ಆದೇಶಿಸಿದೆ. ಈ ಬೆನ್ನಲ್ಲೇ ಸದ್ಯ ಗುಪ್ತಚರ ಇಲಾಖೆ ಎಡಿಜಿಪಿಯನ್ನು ಎತ್ತಂಗಡಿ ಮಾಡಿ ಆದೇಶಿಸಿದೆ.





