ಕಳೆದ ವರ್ಷ ಅಪಘಾತದಿಂದ 300 ಮಂದಿ ಹಾವೇರಿ ಜಿಲ್ಲೆಯಲ್ಲಿ ಸಾವು: ಎಸ್​ಪಿ ಅಂಶುಕುಮಾರ್


ಹಾವೇರಿ: ಜಿಲ್ಲೆಯಲ್ಲಿ ಅಪಘಾತದಿಂದ ಮೃತಪಟ್ಟವರ ಸಂಖ್ಯೆ 2023ಕ್ಕೆ ಹೋಲಿಸಿದರೆ, 2024ರಲ್ಲಿ ಹೆಚ್ಚಳ ಕಂಡುಬಂದಿದೆ. 2023ರಲ್ಲಿ ಅಪಘಾತದಲ್ಲಿ 280 ಮಂದಿ ಸಾವನ್ನಪ್ಪಿದ್ದರೆ, 2024ರಲ್ಲಿ 300 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಅಂಶುಕುಮಾರ್ ತಿಳಿಸಿದರು.

ನಗರದ ತಮ್ಮ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿ 48ರಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಕಡಿಮೆಯಾಗಿದೆ. ಅಲ್ಲದೆ, ಮರಣಿಸುವವರ ಸಂಖ್ಯೆಯೂ ಕಡಿಮೆಯಾಗಿದೆ. ಆದರೆ, ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಹೆದ್ದಾರಿಗಳಲ್ಲಿ ಅಪಘಾತಗಳ ಸಂಖ್ಯೆ ಮತ್ತು ಮೃತಪಟ್ಟವರ ಸಂಖ್ಯೆ ಅಧಿಕವಾಗಿದೆ ಎಂದು ಹೇಳಿದರು.ಗ್ರಾಮಾಂತರ ರಸ್ತೆಗಳಲ್ಲಿಯೂ ಅಪಘಾತದಿಂದ ಸಾವನ್ನಪ್ಪಿದವರ ಸಂಖ್ಯೆ ಏರಿಕೆಯಾಗಿದೆ. ಅಜಾಗರೂಕತೆಯ ಚಾಲನೆ, ವಾಹನ ಸವಾರರ ನಿರ್ಲಕ್ಷ್ಯ ಅಪಘಾತಕ್ಕೆ ಪ್ರಮುಖ ಕಾರಣಗಳಾಗಿವೆ. ಅಪಘಾತ ಅಧಿಕವಾಗಿರುವ ಸ್ಥಳಗಳಲ್ಲಿ ಎಚ್ಚರಿಕಾ ಫಲಕಗಳನ್ನು ಹಾಕಲಾಗಿದೆ. ಅಪಘಾತ ಮತ್ತು ಮರಣ ಪ್ರಮಾಣ ಕಡಿಮೆ ಮಾಡಲು ಜಿಲ್ಲಾ ಪೊಲೀಸ್ ಇಲಾಖೆ ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದೆ ಎಂದರು


Leave a Comment

Your email address will not be published. Required fields are marked *