ನಾಡ ಪಿಸ್ತೂಲ್ ಮಾರಾಟಕ್ಕೆ ಯತ್ನಿಸುತ್ತಿದ್ದ ರೌಡಿಶೀಟರ್​ ಅರೆಸ್ಟ್​


ಬೆಂಗಳೂರು, ಮೇ 24: ಬೆಂಗಳೂರಿನಲ್ಲಿ ನಾಡ ಪಿಸ್ತೂಲ್ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರೌಡಿಶೀಟರ್ ಸಮೀರ್​ ​ಬಂಧಿತ. ಬಂಧಿತ ಸಮೀರ್​ ಕೆ.ಜಿ.ಹಳ್ಳಿ ಪೊಲೀಸ್​ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಗಿದ್ದು, ದೆಹಲಿಯಲ್ಲಿ ಕಡಿಮೆ ಬೆಲೆಗೆ ನಾಡ ಪಿಸ್ತೂಲ್ ಖರೀದಿಸುತ್ತಿದ್ದನು.

ನಂತರ, ಬೆಂಗಳೂರಿನಲ್ಲಿ ಹೆಚ್ಚು ಹಣಕ್ಕೆ ಮಾರಾಟ ಮಾಡುತ್ತಿದ್ದನು. ಈ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಸಿಸಿಬಿ ಪೊಲೀಸರು ರೌಡಿಶೀಟರ್ ಸಮೀರ್​ನನ್ನು ಬಂಧಿಸಿ, ಎರಡು ನಾಡಪಿಸ್ತೂಲ್​ಗಳನ್ನು ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಪೊಲೀಸರು ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.


Leave a Comment

Your email address will not be published. Required fields are marked *