ಬೆಂಗಳೂರಿನ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ವೈಭವ ಕಳೆಕಟ್ಟಿದೆ. ಸಾವಿರಾರು ಜನ ಪ್ರಯಾಣಿಸುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡ ನಾಡಿನ ಸಾಂಸ್ಕೃತಿಕ ವೈಭವ ಅನಾವರಣವಾಗಿದೆ.
ನಾಡಿನ ಎಲ್ಲಡೆ ನವರಾತ್ರಿ ಹಬ್ಬದ ಸಡಗರ ಮನೆ ಮಾಡಿದೆ. ನಾಡಹಬ್ಬ ದಸರಾ ಅನ್ನು ಮೈಸೂರಿನಲ್ಲಿ ಬಹಳ ವಿಜೃಂಭಣೆಯಿಂದ ಆಚರಿಸುತ್ತಾರೆ. ಇತ್ತ ಬೆಂಗಳೂರಿನ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ವೈಭವ ಕಳೆಕಟ್ಟಿದೆ.1 / 6ಸಾವಿರಾರು ಜನ ಪ್ರಯಾಣಿಸುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡ ನಾಡಿನ ಸಾಂಸ್ಕೃತಿಕ ವೈಭವ ಅನಾವರಣವಾಗಿದೆ. ವಿಮಾನ ನಿಲ್ದಾಣದ ಟರ್ಮಿನಲ್ 1 ಹಾಗೂ ಟರ್ಮಿನಲ್ 2 ನಲ್ಲಿ ದಸರಾ ಹಬ್ಬದ ನಿಮಿತ್ತ ನಾಲ್ಕು ದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.2 / 6ಡೊಳ್ಳು ಕುಣಿತ, ಗಾರುಡಿ ಕುಣಿತ, ಯಕ್ಷಗಾನ, ತಮಟೆ ವಾದ್ಯ ದೇಶ-ವಿದೇಶಿ ಪ್ರಯಾಣಿಕರ ಕಣ್ಮನ ಸೆಳೆಯುತ್ತಿವೆ. ತಮಟೆ ವಾದ್ಯಕ್ಕೆ ಪ್ರಯಾಣಿಕರು ಹಾಗೂ ವಿಮಾನ ನಿಲ್ದಾಣದ ಸಿಬ್ಬಂದಿ ಕುಣಿದು ಕುಪ್ಪಳಿಸಿದರು.3 / 6ಟರ್ಮಿನಲ್ 2ರಲ್ಲಿ ದಸರಾ ಸಂಭ್ರಮ ವೇದಿಕೆಯಲ್ಲಿ ವಿವಿಧ ಸಾಂಸ್ಕೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ದೇಶ ವಿದೇಶದಿಂದ ಬರುತ್ತಿರುವ ಪ್ರಯಾಣಿಕರು ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಣ್ತುಂಬಿಕೊಂಡು ಮಸ್ತ್ ಎಂಜಾಯ್ ಮಾಡುತ್ತಿದ್ದಾರೆ.4 / 6ವಿಮಾನ ನಿಲ್ದಾಣದ ಟರ್ಮಿನಲ್ 1 ಹಾಗೂ ಟರ್ಮಿನಲ್ 2ರಲ್ಲಿ ದಸರಾ ಬೊಂಬೆಗಳನ್ನು ಇರಿಸಲಾಗಿದೆ. ನಮ್ಮ ನಾಡಿನ ಸಂಸ್ಕೃತಿಯನ್ನು ಪರಂಪರೆಗಳ ಬಿಂಬಿಸುವ ಬೊಂಬೆಗಳು ಪ್ರಯಾಣಿಕರನ್ನು ಆಕರ್ಷಿಸುತ್ತಿವೆ.5 / 6ಪ್ರಯಾಣಿಕರು ಬೊಂಬೆಗಳ ಬಳಿ ನಿಂತು ಪ್ರಯಾಣಿಕರು ಸೆಲ್ಫಿ ತೆಗೆದುಕೊಂಡು ಖುಷಿಪಟ್ಟರು. ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೆಲ ಹೊತ್ತು ಕಂಡು ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ.