ಮಳೆ ರಭಸಕ್ಕೆ ಬೆಳಗಾವಿ – ಗೋವಾ ಹೆದ್ದಾರಿ ಬಂದ್…


ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮಲಪ್ರಭಾ ನದಿಯಲ್ಲಿ ಒಳ‌ಹರಿವಿನ ಪ್ರಮಾಣ ಹೆಚ್ಚಾಗಿದ್ದು, ಬೆಳಗಾವಿ-ಗೋವಾ ಸಂಪರ್ಕಿಸುವ ಹೆದ್ದಾರಿ ಬಂದ್ ಆಗಿದ್ದು, ಬೆಳಗಾವಿ, ಖಾನಾಪೂರ ಮತ್ತು ರಾಮನಗರದ ಜನರು ಪೇಚಿಗೆ ಸಿಲುಕಿದ್ದಾರೆ.

ಖಾನಾಪುರ ತಾಲೂಕಿನ ಕಣಕುಂಬಿ ಇದು ಮಲಪ್ರಭಾ ನದಿ ಉಗಮ ಸ್ಥಾನ. ಇದೇ ಮಾರ್ಗದಲ್ಲಿರುವ ಕಸಮಳಿ ಗ್ರಾಮದ ಬಳಿ ನದಿಗೆ ಅಡ್ಡಲಾಗಿ ಸೇತುವೆ ಕಾಮಗಾರಿ ನಡೆಯುತ್ತಿದೆ. ಧಾರಾಕಾರ ಮಳೆಗೆ ಏಕಾಏಕಿ ನೀರು ಹೆಚ್ಚಾಗಿ ಮಣ್ಣಿನ ರಸ್ತೆ ಕೊಚ್ಚಿ ಹೋಗಿದ್ದು, ಸಂಚಾರ ಸ್ಥಗಿತಗೊಂಡಿದೆ. ಇದು ಜಾಂಬೋಟಿ, ಚೋರ್ಲಾ ಮಾರ್ಗವಾಗಿ ಗೋವಾಕ್ಕೆ ಸಂಪರ್ಕಿಸುವ ಹೆದ್ದಾರಿಯಾಗಿದ್ದು, ಹಳೆ ಸೇತುವೆ ಕೆಡವಿ ಹೊಸ ಸೇತುವೆ ನಿರ್ಮಾಣದ ಕಾಮಗಾರಿ ನಡೆಯುತ್ತಿದೆ.

ನೀರಿನ ಹರಿವು ಹೆಚ್ಚಳ ಆಗಿರುವ ಹಿನ್ನೆಲೆಯಲ್ಲಿ ರಸ್ತೆ ಕೊಚ್ಚಿ ಹೋಗಿದೆ. ನಿರ್ಮಾಣಾಧೀನ ಸೇತುವೆ ಕೂಡ ಭಾಗಶಃ ಮುಳುಗಡೆಯಾಗಿದೆ. ಮಳೆಗಾಲ ಮುಗಿಯುವವರೆಗೂ ರಸ್ತೆ ಸಂಚಾರ ಬಂದ್ ಆಗುವ ಸಾಧ್ಯತೆ ಇದೆ. ಇದರಿಂದಾಗಿ ಪ್ರಯಾಣಿಕರು ಬೆಳಗಾವಿ, ಖಾನಾಪುರ, ರಾಮನಗರ ಮಾರ್ಗವಾಗಿ ಗೋವಾಕ್ಕೆ ತೆರಳುತ್ತಿದ್ದಾರೆ.


Leave a Comment

Your email address will not be published. Required fields are marked *