ಪಶ್ಚಿಮ ಘಟ್ಟದಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಯಲ್ಲಿ ಕೃಷ್ಣ, ಘಟಪ್ರಭಾ ನದಿಗಳು ಮೈದುಂಬಿ ಹರಿಯುತ್ತಿರುವದರಿಂದ ಚಿಕ್ಕೋಡಿ ಹಾಗೂ ನಿಪ್ಪಾಣಿ ಭಾಗದಲ್ಲಿ ನೆರೆಯಿಂದ ಸೇತುವೆಗಳ ಮೇಲೆ ನೀರು ಹರಿಯುತ್ತಿದೆ.
ಆದ ಕಾರಣ ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲೂಕುಗಳ ಶಾಲಾ-ಕಾಲೇಜುಗಳಿಗೆ 2ದಿನಗಳ ಕಾಲ (ಜೂಲೈ 25 ಹಾಗೂ 26ರಂದು) ರಜೆಯನ್ನ ಘೋಷಿಸಿ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಅವರು ಆದೇಶ ಹೊರಡಿಸಿದ್ದಾರೆ.






