ಪಾಕಿಸ್ತಾನ: ಕರಾಚಿ ಏರ್​ಪೋರ್ಟ್​ ಹೊರಗೆ ಸ್ಫೋಟ, ಇಬ್ಬರು ಚೀನಾ ನಾಗರಿಕರು ಸಾವು


ಪಾಕಿಸ್ತಾನದ ಕರಾಚಿ ವಿಮಾನ ನಿಲ್ದಾಣದ ಹೊರಗೆ ದೊಡ್ಡ ಸ್ಫೋಟ ಸಂಭವಿಸಿದೆ. ಇದರಲ್ಲಿ ಇಬ್ಬರು ಚೀನಾ ಪ್ರಜೆಗಳು ಸಾವನ್ನಪ್ಪಿದ್ದಾರೆ. 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಸಾವಿನ ಸಂಖ್ಯೆ ಮತ್ತು ಗಾಯಗೊಂಡವರ ಸಂಖ್ಯೆ ಇನ್ನೂ ಹೆಚ್ಚಾಗಬಹುದು.

ಪಾಕಿಸ್ತಾನದ ಕರಾಚಿಯ ಜಿನ್ನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ತಡರಾತ್ರಿ ಭಾರೀ ಸ್ಫೋಟ ಸಂಭವಿಸಿದೆ. ಬಿಬಿಸಿ ವರದಿಯ ಪ್ರಕಾರ, ಸ್ಫೋಟದಲ್ಲಿ ಇಬ್ಬರು ಚೀನಾದ ನಾಗರಿಕರು ಸಾವನ್ನಪ್ಪಿದ್ದಾರೆ. ಸಿಂಧ್ ಪ್ರಾಂತ್ಯದಲ್ಲಿ ಪವರ್ ಪ್ರಾಜೆಕ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ ಚೀನಾದ ಇಂಜಿನಿಯರ್‌ಗಳ ಬೆಂಗಾವಲು ವಾಹನವನ್ನು ಗುರಿಯಾಗಿಸಿಕೊಂಡು ಸ್ಫೋಟ ನಡೆಸಲಾಗಿದೆ ಎಂದು ರಾಯಭಾರ ಕಚೇರಿ ತಿಳಿಸಿದೆ. ಪ್ರತ್ಯೇಕತಾವಾದಿ ಬಲೂಚಿಸ್ತಾನ್ ರಾಷ್ಟ್ರೀಯ ಸೇನೆ ದಾಳಿಯ ಹೊಣೆ ಹೊತ್ತುಕೊಂಡಿದೆ.

ಸಿಂಧ್ ಪ್ರಾಂತೀಯ ಗೃಹ ಸಚಿವ ಜಿಯಾ ಉಲ್ ಹಸನ್ ಲಾಂಜಾರ್ ಅವರು ಸ್ಫೋಟಕ್ಕೆ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಬಳಸಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ನಗರದ ಹಲವು ಪ್ರದೇಶಗಳಲ್ಲಿ ಸ್ಫೋಟದ ಸದ್ದು ಕೇಳಿಬಂದಿದೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ. ಎಲ್ಲಾ ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಿನ್ನಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾತ್ರಿ 11 ಗಂಟೆಗೆ ಸ್ಫೋಟ ಸಂಭವಿಸಿದೆ ಭಾನುವಾರ ರಾತ್ರಿ ಸುಮಾರು 11 ಗಂಟೆಗೆ ಸ್ಫೋಟ ಸಂಭವಿಸಿದೆ ಎಂದು ಪಾಕಿಸ್ತಾನದ ಮಾಧ್ಯಮ ಸಂಸ್ಥೆ ಆಜ್ ನ್ಯೂಸ್ ವರದಿ ಮಾಡಿದೆ. ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ದಟ್ಟ ಹೊಗೆ ಆವರಿಸಿತ್ತು. ಅಪಘಾತದ ಸ್ಥಳದಲ್ಲಿ ಭಾರೀ ಸೇನಾಪಡೆ ನಿಯೋಜಿಸಲಾಗಿದೆ.


Leave a Comment

Your email address will not be published. Required fields are marked *