Petrol Diesel Price on October O7: ಭಾರತದಾದ್ಯಂತ ಸ್ಥಿರತೆ ಕಾಯ್ದುಕೊಂಡ ಪೆಟ್ರೋಲ್, ಡೀಸೆಲ್ ದರ


ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು, ಅಕ್ಟೋಬರ್ 07, ಸೋಮವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.72 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.44 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.95 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.88 ರೂ. ಇದೆ.

Petrol Diesel Price on October O7: ಭಾರತದಾದ್ಯಂತ ಸ್ಥಿರತೆ ಕಾಯ್ದುಕೊಂಡ ಪೆಟ್ರೋಲ್, ಡೀಸೆಲ್ ದರ

ಪೆಟ್ರೋಲ್Image Credit source: MJotorama

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ ಬ್ರೆಂಟ್ ಕಚ್ಚಾ ತೈಲವು 78.05ಡಾಲರ್​ ಆಗಿದ್ದರೆ, ಡಬ್ಲ್ಯೂಟಿಐ ಕಚ್ಚಾ ಪ್ರತಿ ಬ್ಯಾರೆಲ್‌ಗೆ 74.38ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ದೇಶಾದ್ಯಂತ ಇಂದು ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರವಾಗಿದೆ.

ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.72 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.44 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.95 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.88 ರೂ. ಇದೆ.

ಇಂದು ದೇಶದ ರಾಜಧಾನಿ ನವದೆಹಲಿಯಲ್ಲಿ ಡೀಸೆಲ್ ಬೆಲೆ 87.62 ರೂ. ಆದರೆ, ಮುಂಬೈನಲ್ಲಿ ಡೀಸೆಲ್ ಬೆಲೆ 89.97 ರೂ. ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 91.76 ರೂ ಮತ್ತು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 92.43 ರೂ. ಇದೆ. ಬೆಂಗಳೂರಿನಲ್ಲಿ ಪೆಟ್ರೋಲ್ 102.86 ರೂ., ಡೀಸೆಲ್ 88.94 ರೂ. ಇದೆ.

ಇಂದು ಚಿತ್ತೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 110.48 ರೂ. ಇಂದು ತವಾಂಗ್‌ನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 96.44 ರೂ. ಇಂದು ಜೋರ್ಹತ್‌ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 95.88 ರೂ. ಇಂದು ನಳಂದದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 105.80 ರೂ. ಇಂದು ಚಂಡೀಗಢದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.24 ರೂ. ಇಂದು ದುರ್ಗದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 100.60 ರೂ. ಇಂದು ಜಮ್ಮುವಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 95.43 ರೂ. ಇಂದು ದಿಯೋಗಢದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 97.97 ರೂ. ಇದೆ.

ಮತ್ತಷ್ಟು ಓದಿ: Petrol Diesel Price on October O6: ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ

ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆಯನ್ನು ಆಧರಿಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯನ್ನು ಪರಿಶೀಲಿಸಿದ ನಂತರ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿರ್ಧರಿಸುತ್ತವೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯ ಮಟ್ಟದಲ್ಲಿ ಪೆಟ್ರೋಲ್‌ಗೆ ವಿಧಿಸಲಾದ ತೆರಿಗೆಯಿಂದಾಗಿ ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ವಿಭಿನ್ನವಾಗಿವೆ. ಪೆಟ್ರೋಲ್ ಮತ್ತು ಡೀಸೆಲ್ ಉತ್ಪಾದನೆಗೆ ಪ್ರಾಥಮಿಕ ಕಚ್ಚಾ ವಸ್ತುವು ಕಚ್ಚಾ ತೈಲವಾಗಿದೆ; ಅದರಂತೆ, ಅದರ ಬೆಲೆ ನೇರವಾಗಿ ಈ ಇಂಧನಗಳ ಅಂತಿಮ ವೆಚ್ಚದ ಮೇಲೆ ಪ್ರಭಾವ ಬೀರುತ್ತದೆ.


Leave a Comment

Your email address will not be published. Required fields are marked *