ಅಪ್ರಾಪ್ತ ಬಾಲಕಿಯ ಅಪಹರಿಸಿ ಆ್ಯಸಿಡ್​ ಎರಚಿದ ದುಷ್ಕರ್ಮಿಗಳು

ಅಪ್ರಾಪ್ತ ಬಾಲಕಿಯನ್ನು ಮನೆಯಿಂದ ಅಪಹರಿಸಿ ಇಬ್ಬರು ದುಷ್ಕರ್ಮಿಗಳು ಆಕೆಯ ಮೇಲೆ ಹಲ್ಲೆ ನಡೆಸಿದ್ದಷ್ಟೇ ಅಲ್ಲದೆ ಆ್ಯಸಿಡ್ ಎರಚಿ ಸುಟ್ಟಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಘಟನೆ ನಡೆದಿದೆ. 8ನೇ ತರಗತಿ ವಿದ್ಯಾರ್ಥಿನಿಯಾಗಿರುವ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪ್ರಾಪ್ತ ಬಾಲಕಿಯ ಅಪಹರಿಸಿ ಆ್ಯಸಿಡ್​ ಎರಚಿದ ದುಷ್ಕರ್ಮಿಗಳು

ಕ್ರೈಂImage Credit source: Psychology Magazine

ಅಪ್ರಾಪ್ತ ಬಾಲಕಿಯನ್ನು ಮನೆಯಿಂದ ಅಪಹರಿಸಿ ಇಬ್ಬರು ದುಷ್ಕರ್ಮಿಗಳು ಆಕೆಯ ಮೇಲೆ ಹಲ್ಲೆ ನಡೆಸಿದ್ದಷ್ಟೇ ಅಲ್ಲದೆ ಆ್ಯಸಿಡ್ ಎರಚಿ ಸುಟ್ಟಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಘಟನೆ ನಡೆದಿದೆ. 8ನೇ ತರಗತಿ ವಿದ್ಯಾರ್ಥಿನಿಯಾಗಿರುವ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಹ್ರಾ ಪೊಲೀಸ್ ವ್ಯಾಪ್ತಿಯಲ್ಲಿರುವ ಪತ್ರಾ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್ ಕುಮಾರ್ ಸಿಂಗ್ ಹೇಳಿದ್ದಾರೆ. ಘಟನೆ ಬೆಳಗಿನ ಜಾವ 3.30ರ ಸುಮಾರಿಗೆ ನಡೆದಿದೆ, ಬಾಲಕಿ ಗಂಭೀರ ಸ್ಥಿತಿಯಲ್ಲಿದ್ದು, ಉನ್ನತ ವೈದ್ಯಕೀಯ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು.

ಬಾಲಕಿಯ ಸಹೋದರ ದಾಳಿಯ ಭಯಾನಕ ವಿವರಗಳನ್ನು ವಿವರಿಸಿದ್ದು, ಆಕೆ ಮಲಗಿದ್ದಾಗ ಬೆಳಗಿನ ಜಾವ ಬಂದ ದುಷ್ಕರ್ಮಿಗಳು ಆಕೆಯ ಬಾಯಿ ಮುಚ್ಚಿಸಿ ಅರಣ್ಯಕ್ಕೆ ಎಳೆದೊಯ್ದಿದ್ದರು.

ಮತ್ತಷ್ಟು ಓದಿ: ಹುಬ್ಬಳ್ಳಿಯಲ್ಲಿ ಬೆಳ್ಳಂ ಬೆಳಗ್ಗೆ ಗುಂಡಿನ ಸದ್ದು, ಡಕಾಯಿತನ​ ಮೇಲೆ ಫೈರಿಂಗ್​

ಪ್ರಾಥಮಿಕ ತನಿಖೆಯಲ್ಲಿ ಆಕೆಯ ಮೇಲೆ ಆ ವ್ಯಕ್ತಿಗಳಿಗೆ ಯಾವುದೋ ದ್ವೇಷವಿದ್ದಂತೆ ಕಾಣುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಬಾಲಕಿಯ ಸಹೋದರ ರಹ್ರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

ಅದೇ ಗ್ರಾಮದ ಶಂಕಿತ ರಾಂಪಾಲ್ ಎಂಬಾತನ ಹೆಸರು ಹೊರಬಂದಿದೆ. ಅಮ್ರೋಹಾ ಜಿಲ್ಲಾ ಮ್ಯಾಜಿಸ್ಟ್ರೇಟ್ ನಿಧಿ ಗುಪ್ತಾ ಅವರು ಬಾಲಕಿಯ ಸ್ಥಿತಿಯ ಬಗ್ಗೆ ಜಿಲ್ಲಾ ಪೊಲೀಸ್ ಮುಖ್ಯಸ್ಥರು ಮತ್ತು ಇತರ ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿದ್ದಾರೆ ಮತ್ತು ಸಾಧ್ಯವಿರುವ ಎಲ್ಲ ನೆರವು ಒದಗಿಸಲಾಗುವುದು ಎಂದಿದ್ದಾರೆ.

Leave a Comment

Your email address will not be published. Required fields are marked *