ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಆಗ್ರಹಿಸಿ, ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಪೋಸ್ಟರ್‌ ಅಭಿಯಾನ


ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆಗೆ ಕಾರಣರಾದ ಪ್ರಿಯಾಂಕ್‌ ಖರ್ಗೆ ಅವರ ರಾಜೀನಾಮೆಗೆ ಆಗ್ರಹಿಸಿ ಇಂದು ವಿಧಾನ ಪರಿಷತ್‌ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಪೋಸ್ಟರ್‌ ಅಭಿಯಾನ ನಡೆಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್‌ ಸದಸ್ಯರಾದ ಶ್ರೀ ಸಿ. ಟಿ. ರವಿ, ಪ್ರಮುಖರಾದ ಶ್ರೀ ಜಗದೀಶ್‌ ಹಿರೇಮನಿ, ಶ್ರೀ ಉಮೇಶ್‌ ಶೆಟ್ಟಿ, ಮಾಧ್ಯಮ ಪ್ರಕೋಷ್ಠದ ರಾಜ್ಯ ಸಂಚಾಲಕರಾದ ಶ್ರೀ ಕರುಣಾಕರ ಖಾಸಲೆ, ಸಹ ಸಂಚಾಲಕರಾದ ಶ್ರೀ ಪ್ರಶಾಂತ್‌ ಕೆಡೆಂಜಿ ಮತ್ತು ಪ್ರಮುಖರು ಉಪಸ್ಥಿತರಿದ್ದರು.


Leave a Comment

Your email address will not be published. Required fields are marked *