ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ: 8 ಆರೋಪಿಗಳ ಬಂಧನ 


ಮಂಗಳೂರು: ಬಜ್ಪೆ ಸಮೀಪದ ಕಿನ್ನಿ ಪದವು ಸಮೀಪ ದುಷ್ಕರ್ಮಿಗಳಿಂದ ಕೊಲೆಯಾದ ರೌಡಿ ಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು.

ಅಬ್ದುಲ್ ಸಫ್ವಾನ್, ನಿಯಾಜ್, ಮೊಹಮ್ಮದ್ ಮುಝಮಿಲ್, ಕಲಂದರ್ ಶಾಫಿ, ರಂಜಿತ್, ನಾಗರಾಜ್, ಮೊಹಮ್ಮದ್ ರಿಝ್ವಾನ್ ಮತ್ತು ಆದಿಲ್‌ ಮೆಹರೂಫ್‌ ಬಂಧಿತ ಆರೋಪಿಗಳು.

ಅವರು ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಚಾರವನ್ನು ಬಹಿರಂಗಪಡಿಸಿದರು. ಆರೋಪಿಗಳನ್ನು ಶುಕ್ರವಾರ ರಾತ್ರಿ ಬಂಧಿಸಲಾಗಿದ್ದು ಅವರ ಹಿನ್ನಲೆ, ಘಟನೆಗೆ ಕಾರಣವಾದ ಅಂಶಗಳಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಕ್ರಮ ಕೈಗೊಂಡಿದ್ದು ಯಾವುದೇ ಸಮುದಾಯದವರು ಕೂಡ ಕಾನೂನನ್ನು ಕೈಗೆತ್ತಿಕೊಳ್ಳಲು ಅವಕಾಶ ನೀಡುವುದಿಲ್ಲ. ಕೋಮು ಸಂಘರ್ಷ ತಡೆಗೆ ಆಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ನಿರ್ಮಿಸಲಾಗುವುದು ಈ ಟಾಸ್ಕರ್ ಫೊರ್ಸ್ ದಕ ಮತ್ತು ಉಡುಪಿ ಜಿಲ್ಲೆ ಸೀಮಿತವಾಗಿ ಕಾರ್ಯಾಚರಿಸಲಿದೆ ಎಂದರು.

ಇತ್ತಿಚೇಗೆ ಹತ್ಯೆಯಾದ ಅಶ್ರಫ್ ಪ್ರಕರಣದಲ್ಲಿ ಈಗಾಗಲೇ 21 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಮುಂದೆ ಜಿಲ್ಲೆಯಲ್ಲಿ ಇಂತಹ ಘಟನೆಗಳು ನಡೆಯಬಾರದು. ಯಾರೇ ಕೂಡ ಕೋಮು ಪ್ರಚೋದನೆಯ ಭಾಷಣ ಮಾಡಿದರೆ ಅವರ ವಿರುದ್ದ ಕೂಡ ಕಠಿಣ ಕ್ರಮ ಕೈಗೊಳ್ಳಲು ಪೋಲಿಸರಿಗೆ ಸೂಚನೆ ನೀಡಿರುವುದಾಗಿ ತಿಳಿಸಿರು.


Leave a Comment

Your email address will not be published. Required fields are marked *