ಲಕ್ಷ್ಮೀ ಹೆಬ್ಬಾಳ್ಕರ್​​ಗೆ ಅವಾಚ್ಯ ಪದ ಬಳಕೆ ಆರೋಪ: ಸಿ.ಟಿ ರವಿಗೆ ಬಿಗ್ ರಿಲೀಫ್


ನವದೆಹಲಿ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​ಗೆ​ ಅವಾಚ್ಯ ಪದದಿಂದ ನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ವಿರುದ್ಧ ಪ್ರಕರಣಕ್ಕೆ ಸುಪ್ರೀಂಕೋರ್ಟ್  ತಡೆಯಾಜ್ಞೆ ನೀಡಿದೆ. 

ಬೆಳಗಾವಿ ಅಧಿವೇಶನದ ವೇಳೆ ಅವಾಚ್ಯ ಪದದಿಂದ ನಿಂದನೆ ಮಾಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ್​ ಅವರು ದೂರು ನೀಡಿದ್ದರು. ಆದ್ರೆ, ಈ ದೂರು ಪ್ರಶ್ನಿಸಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದ ಸಿಟಿ ರವಿಗೆ ಬಿಗ್ ರಿಲೀಫ್ ಸಿಕ್ಕಿದೆ.ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ ಆರೋಪದ ಮೇಲೆ ಬಿಜೆಪಿ ಶಾಸಕ ಸಿ.ಟಿ. ರವಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್​​ ನಿರಾಕರಿಸಿತ್ತು.

ಈ ಆದೇಶವನ್ನು ಪ್ರಶ್ನಿಸಿ ಸಿಟಿ ರವಿ ಅವರು ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದರು. ಇಂದು(ಮೇ 19) ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಎಂ. ಸುಂದ್ರೇಶ್ ಮತ್ತು ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಅವರ ಸುಪ್ರೀಂಕೋರ್ಟ್​ ಪೀಠ, ಸಿ.ಟಿ. ರವಿ ವಿರುದ್ಧ ವಿಚಾರಣಾ ಪ್ರಕ್ರಿಯೆಗಳಿಗೆ ತಡೆ ನೀಡಿ ಆದೇಶ ಹೊರಡಿಸಿದೆ.


Leave a Comment

Your email address will not be published. Required fields are marked *