ಗೃಹ ದಚಿವ ಡಾ” ಜಿ.ಪರಮೇಶ್ವರ್ ರವರ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ


ಕರ್ನಾಟಕ ರಾಜ್ಯದ ಗೃಹ ಸಚಿವ ಡಾ”ಜಿ.ಪರಮೇಶ್ವರ್ ಶಿಕ್ಷಣ ಸಂಸ್ಥೆಗಳ ವಿರುದ್ಧ ಕೇಂದ್ರ ಬಿಜೆಪಿ ಸರ್ಕಾರ ಇಡಿ ದಾಳಿ ಮಾಡಿಸಿ ಭಯದ ವಾತಾವರಣ ನಿರ್ಮಿಸಲ ಹೊರಟಿದೆಯೆ ಎಂಬ ಅನುಮಾನ ಶುರುವಾಗಿದೆ.

ಸುಮಾರು ಒಂಬತ್ತು ಕಾರುಗಳಲ್ಲಿ ಬಂದ ಇಡಿ ಅಧಿಕಾರಿ ಗಳು , ತುಮಕೂರಿನ ಹೆಗ್ಗೆರೆಯಲ್ಲಿರುವ ಡಾ” ಜಿ.ಪರಮೇಶ್ವರ್‌ ಒಡೆತನದ ಸಿದ್ದಾರ್ಥ ಮೆಡಿಕಲ್ ಕಾಲೇಜು ಹಾಗೂ ಮರಳೂರು ದಿನ್ನೆಯ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜು ಹಾಗೂ ಬೆಂಗಳೂರು ಗ್ರಾಮಾಂತರದ ನೆಲಮಂಗಲದ ಬಳಿಯಿರುವ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ಮಾಡಿ , ಶಿಕ್ಷಣ ಸಂಸ್ಥೆಗಳ ಕಚೇರಿಗಳು ಹಾಗೂ ಪ್ರಾಂಶುಪಾಲರ ಕೊಠಡಿ ಗಳಲ್ಲಿರುವ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.

ಈ ಹಿಂದೆಯೂ 2019 ರಲ್ಲಿಯೂ ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ಮಾಡಿತ್ತು.
ಈ‌ ಸಂದರ್ಭದಲ್ಲಿ ಪರಮೇಶ್ವರ್ ಆಪ್ತ ಸಹಾಯಕ ರಮೇಶ್ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದರು.
ಗುರುವಾರವೂ ಸಹ ದಾಖಲೆಗಳ ಶೋಧ ಕಾರ್ಯ ಮುಂದುವರೆಸಿದ್ದ ಕೇಂದ್ರ ಜಾರಿ ನಿರ್ದೇಶನಾಲಯ.

ಇದರ ಬಗ್ಗೆ ರಾಜ್ಯದ ಗೃಹ ಸಚಿವರಾದ ಡಾ”ಜಿ.ಪರಮೇಶ್ವರ್ ರವರು ಮಾಧ್ಯಮ ದವರೊಂದಿಗೆ ಮಾತನಾಡಿ ಸ್ಪಷ್ಟನೆ ನೀಡಿದ್ದಾರೆ.


Leave a Comment

Your email address will not be published. Required fields are marked *