ಭಾರೀ ಮಳೆಯಿಂದಾಗಿ KRS ಒಳಹರಿವು ಹೆಚ್ಚಳ


ಮಂಡ್ಯ: ಕಳೆದ ಹಲವು ದಿನಗಳಿಂದ ಕರ್ನಾಟಕದಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿದೆ. ಪರಿಣಾಮ ಜಲಾಶಯಗಳಿಗೆ ಜೀವಕಳೆ ಬಂದಿದೆ. ಅದರಲ್ಲೂ ಕೆಆರ್​ ಎಸ್​ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಈ ಬಾರಿಯ ಬಿರು ಬೇಸಿಗೆ ಬಿಸಿಲಿನ ತಾಪಕ್ಕೆ ಕೃಷ್ಣರಾಜ ಸಾಗರ ಜಲಾಶಯದ (KRS) ನೀರಿನ ಪ್ರಮಾಣ 89 ಅಡಿಗೆ ಕುಸಿದಿತ್ತು.ಆದ್ರೆ, ಇದೀಗ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಒಳಹರಿವಿನ ಪ್ರಮಾಣದಲ್ಲಿ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದ್ದು, ಸದ್ಯ ಜಲಾಶಯಕ್ಕೆ 8869 ಕ್ಯೂಸೆಕ್ ನೀರು ಹರಿದುಬರುತ್ತಿದೆ.ಇಂದು(ಮೇ 26) ಬೆಳಿಗ್ಗೆ 89 ಅಡಿ ನೀರಿನ ಮಟ್ಟ ಇತ್ತು. ಮಧ್ಯಾಹ್ನ 12 ಗಂಟೆ ವೇಳೆಗೆ ಹೆಚ್ಚುವರಿ 1 ಅಡಿ ನೀರು ಹರಿದುಬಂದಿತ್ತು. ಅದು ಸಂಜೆ ವೇಳೆ ಸಂಜೆ ವೇಳೆಗೆ 90.20 ಅಡಿಗೆ ನೀರಿನ ಮಟ್ಟ ಏರಿಕೆಯಾಗಿದೆ. ಮಳೆಗಾಲ ಆರಂಭಕ್ಕೂ ಮುನ್ನವೇ ಕೆಆರ್​ ಎಸ್​ ಜಲಾಶಯಕ್ಕೆ ಒಳ ಹರಿವು ಹೆಚ್ಚಳವಾಗಿದ್ದರಿಂದ ರೈತರಲ್ಲಿ ಮಂದಹಾಸ ಮೂಡಿದೆ.


Leave a Comment

Your email address will not be published. Required fields are marked *