SSLCಯಲ್ಲಿ‌ ಶೇ 60ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಜಿಲ್ಲೆಗಳ DDPIಗಳಿಗೆ ಸಿಎಂ ಶಾಕ್.


ಬೆಂಗಳೂರು, ಮೇ 31: ಈ ವರ್ಷದ ಎಸ್​ಎಸ್​ಎಲ್​​ಸಿ ಪರೀಕ್ಷೆಯಲ್ಲಿ 5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಸಾಗುವ ಮೂಲಕ ಶೇ.62.34ರಷ್ಟು ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಫಲಿತಾಂಶ ಕಡಿಮೆ ಬಂದಿದೆ. ಈ ನಿಟ್ಟಿನಲ್ಲಿ ಇಂದು ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ಸಭೆ ಮಾಡಿದ ಸಿಎಂ ಸಿದ್ದರಾಮಯ್ಯ  , ಎಸ್​ಎಸ್​ಎಲ್​​ಸಿ ಫಲಿತಾಂಶ ವಿಚಾರವಾಗಿ ಮಹತ್ವದ ಚರ್ಚೆ ಮಾಡಿದ್ದಾರೆ. ಈ ವೇಳೆ ಫಲಿತಾಂಶ ಕಡಿಮೆ ಬರುವುದಕ್ಕೆ ಶಿಕ್ಷಕರ, ಸಿಬ್ಬಂದಿ ಕೊರತೆ ಎಂದು ಇಲ್ಲ ಸಲ್ಲಸ ನೆಪ ಹೇಳಬೇಡಿ ಎಂದಿದ್ದಾರೆ. ಅಷ್ಟೇ ಅಲ್ಲದೆ ಶೇ 60 ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ ನೀಡುವಂತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್​ಗೆ ಸೂಚನೆ ನೀಡಿದ್ದಾರೆ.

DDPIಗಳಿಗೆ ಸಿಎಂ ಶಾಕ್

ಡಿಸಿ ಮತ್ತು ಜಿಲ್ಲಾ ಪಂಚಾಯತ್ ಸಿಇಒಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ ಮಾಡಿದ್ದು, ಶೇ 60 ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ ನೀಡಬೇಕು. ನೋಟಿಸ್​ಗೆ ಕೊಟ್ಟ ಉತ್ತರ ಸಮರ್ಪಕ‌ ಅನ್ನಿಸದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್​ಗೆ ಸೂಚಿಸಿದ್ದಾರೆ.ಶಿಕ್ಷಕರು ಮತ್ತು ಡಿಡಿಪಿಐಗಳು ಆಸಕ್ತಿಯಿಂದ ಕೆಲಸ ಮಾಡಿದರೆ ಉತ್ತಮ ಫಲಿತಾಂಶ ಎಲ್ಲಾ ಕಡೆ ಬರುತ್ತದೆ. ದಕ್ಷಿಣ ಕನ್ನಡ ಮತ್ತು ಇತರೆ ಜಿಲ್ಲೆಗಳಲ್ಲಿ ಉತ್ತಮ ಫಲಿತಾಂಶ ಬರುತ್ತಿದೆ. ಡಿಡಿಪಿಐಗಳು ಜವಾಬ್ದಾರಿ ತೆಗೆದುಕೊಳ್ಳಬೇಕು. ಡಿಸಿಪಿಐಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಸೂಚನೆ ನೀಡಿದ್ದಾರೆ.ಶಿಕ್ಷಕರು, ಡಿಡಿಪಿಐಗಳು ಆಸಕ್ತಿಯಿಂದ ಕೆಲಸ ಮಾಡುತ್ತಿದ್ದಾರೋ ಇಲ್ಲವೋ ಪರಿಶೀಲಿಸಿ, ಅವರು ಆಸಕ್ತಿಯಿಂದ ಕೆಲಸ ಮಾಡಿದರೆ ಉತ್ತಮ ಫಲಿತಾಂಶ ಬರುತ್ತದೆ. ವಿವೇಕ ಯೋಜನೆಯಡಿಯಲ್ಲಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಹಣ ಮಂಜೂರು ಮಾಡಲು ವಿಳಂಬ ಬೇಡ. ಹಣ ಬಿಡುಗಡೆ ಆಗಿದ್ದರೂ ಕೆಲವೆಡೆಶಾಲಾ ಕೊಠಡಿಗಳು ನಿರ್ಮಾಣವಾಗಿಲ್ಲ. ಈ ಬಗ್ಗೆ ಸಭೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.


Leave a Comment

Your email address will not be published. Required fields are marked *